Realtime blog statisticsweb statistics
udupibits.in
Breaking News
ಉಡುಪಿ: ಅಕ್ರಮ ದಂಧೆಕೋರರಿಂದ ಹಣ ವಸೂಲಿ- ಉಡುಪಿ ನಗರ ಪೊಲೀಸ್ ಠಾಣೆಯ ಎಸ್ ಬಿ ಪಿಸಿ ಮಯ್ಯದ್ದಿ ವಿರುದ್ಧ ದೂರು.

ಮುದ್ದು ಮೂಡುಬೆಳ್ಳೆಗೆ ‘ತುಳುನಾಡ ತುಳುಶ್ರೀ’ ಪ್ರಶಸ್ತಿ ಪ್ರದಾನ

ಬಂಟ್ವಾಳ: ಇಲ್ಲಿಗೆ ಸಮೀಪದ ಆಲದಪದವು ಅಕ್ಷರ ಪ್ರತಿಷ್ಠಾನ ಕೊಡಮಾಡುವ ‘ತುಳುನಾಡ ತುಳುಶ್ರೀ’ ಪ್ರಶಸ್ತಿಯನ್ನು ಹಿರಿಯ ಸಾಹಿತಿ ಹಾಗೂ ಜಾನಪದ ಸಂಶೋಧಕ ಮುದ್ದು ಮೂಡುಬೆಳ್ಳೆ ಅವರಿಗೆ ಪಾಂಗಲ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಶೇಷಶಯನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು.

ದೇವಸ್ಥಾನದ ಆಡಳಿತ ಸಮಿತಿ ವ್ಯವಸ್ಥಾಪಕರಾದ ಕೆ.ಲಕ್ಷ್ಮಿನಾರಾಯಣ ಉಡುಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕ್ಷೇತ್ರದ ಬೆಳವಣಿಗೆಯಲ್ಲಿ ಮಹತ್ತರ ಪಾತ್ರ ವಹಿಸಿರುವ ಅಕ್ಷರ ಪ್ರತಿಷ್ಠಾನ ಬಳಗವು ತುಳು, ಕನ್ನಡ ಸಾಹಿತ್ಯ ಕ್ಷೇತ್ರದ ಬೆಳವಣಿಗೆಗೂ ಮಹಾನ್ ಕೊಡುಗೆ ನೀಡುತ್ತಿದೆ ಎಂದು ಹೇಳಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಡಿ.ಎಂ.ಕುಲಾಲ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಲ್ಲಾ ವರ್ಗದ ಜನರನ್ನು ಒಂದೆಡೆ ಬೆಸೆಯುವ ಕಲೆ, ಸಾಹಿತ್ಯದ ಅಭಿರುಚಿ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚೆಚ್ಚು ನಡೆಯಬೇಕಾದ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಇಂತಹ ಸಾಹಿತ್ಯ ಸಂಘಟನೆಗಳನ್ನು ಜನತೆ ಪ್ರೋತ್ಸಾಹಿಸಬೇಕಾಗಿದೆ ಎಂದರು.

ದೇವಸ್ಥಾನದ ಆಡಳಿತ ಸಮಿತಿ ಸದಸ್ಯರಾದ ಉದಯ ಪಾಂಗಣ್ಣಾಯ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿ, ಅರ್ಹ ಸಾಹಿತಿಗಳನ್ನು ಗುರುತಿಸಿ ಗೌರವಿಸುವುದರಿಂದ ಸಾಹಿತ್ಯ ಕ್ಷೇತ್ರ ಬೆಳೆಯುತ್ತದೆ ಎಂದು ಹೇಳಿದರು. ಪ್ರಶಸ್ತಿ ಸ್ವೀಕರಿಸಿದ ಮುದ್ದು ಮೂಡುಬೆಳ್ಳೆ ಮಾತನಾಡಿ, ಕಲೆ ಸಾಹಿತ್ಯ ಕ್ಷೇತ್ರದ ಪ್ರತಿಭಾವಂತರನ್ನು ಗುರುತಿಸುವ ಕಾರ್ಯ ಶ್ಲಾಘನೀಯ. ಯಾವುದೇ ಪ್ರಭಾವಕ್ಕೆ ಒಳಗಾಗದೇ ಪ್ರತಿಷ್ಠಾನವೇ ಗುರುತಿಸಿ ಗೌರವಿಸುವ ಕಾರ್ಯ ಇತರ ಸಂಘಟನೆಗಳಿಗೆ ಮಾದರಿಯಾಗಿದೆ ಎಂದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯ ರಘು ಇಡ್ಕಿದು, ಮುದ್ದು ಮೂಡುಬೆಳ್ಳೆಯವರ ಬಗ್ಗೆ ಅಭಿನಂದನ ಭಾಷಣ ಮಾಡಿದರು. ಬಹುಮುಖಿ ಸಾಧಕ ಮುದ್ದು ಮೂಡುಬೆಳ್ಳೆಯವರ ಬದುಕು, ಬರೆಹಗಳು ಮಾದರಿಯಾದುದು ಎಂದರು.

ಕರ್ನಾಟಕ ಸರಕಾರಿ ನೌಕರರ ಸಂಘದ ಬಂಟ್ವಾಳ ತಾಲೂಕು ಅಧ್ಯಕ್ಷ ಉಮಾನಾಥ ರೈ ಮೇರಾವು, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಶುಭ ಹಾರೈಸಿದರು. ದೇವಸ್ಥಾನದ ಆಡಳಿತ ಸಮಿತಿ ಸದಸ್ಯರಾದ ಸುಂದರ ನಾಯ್ಕ್, ಅಕ್ಷರ ಪ್ರತಿಷ್ಠಾನದ ಅಧ್ಯಕ್ಷ ಡಾ| ರಾಮಕೃಷ್ಣ ಎಸ್., ಉಪಾಧ್ಯಕ್ಷ ಪ್ರಶಾಂತ್ ಕೋಟ್ಯಾನ್ ಉಪಸ್ಥಿತರಿದ್ದರು.

ಪ್ರತಿಷ್ಠಾನದ ನಿರ್ದೇಶಕ ದಿನೇಶ್ ಅಮೀನ್ ಸ್ವಾಗತಿಸಿದರು. ಸಂಚಾಲಕ ಗೋಪಾಲ ಅಂಚನ್ ಪ್ರಸ್ತಾವಿಸಿದರು. ನಿರ್ದೇಶಕ ರತ್ನದೇವ್ ಪುಂಜಾಲಕಟ್ಟೆ ವಂದಿಸಿದರು. ಕಾರ್ಯದರ್ಶಿ ಎಚ್ಕೆ ನಯನಾಡು ಕಾರ್ಯಕ್ರಮ ನಿರೂಪಿಸಿದರು.

One Comment

  1. ashwinbelle66@gmail.com'

    Ashwin Lawrence

    February 19, 2015 at 8:18 pm

    Very Nice article. No media of moodubelle covered this story. Thank you diwana sir.

Leave a Reply

Your email address will not be published. Required fields are marked *