Realtime blog statisticsweb statistics
udupibits.in
Breaking News
ಉಡುಪಿ: ಅಕ್ರಮ ದಂಧೆಕೋರರಿಂದ ಹಣ ವಸೂಲಿ- ಉಡುಪಿ ನಗರ ಪೊಲೀಸ್ ಠಾಣೆಯ ಎಸ್ ಬಿ ಪಿಸಿ ಮಯ್ಯದ್ದಿ ವಿರುದ್ಧ ದೂರು.

ಪಿಸ್ತೂಲ್ ಸಹಿತ ಇಬ್ಬರ ಬಂಧನ

ಉಡುಪಿ: ಉಡುಪಿ ಜಿಲ್ಲಾ ಅಪರಾಧ ಗುಪ್ತ ವಾರ್ತಾ ವಿಭಾಗ (ಡಿಸಿಐಬಿ)ದ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯೊಂದರಲ್ಲಿ ಪಿಸ್ತೂಲ್ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ.

ಕುಂದಾಪುರ ತಾಲೂಕು ಕೋಟೇಶ್ವರ ಹಳೆ ಅಳಿವೆಕೋಡಿ ನಿವಾಸಿ ಯೋಗೀಶ್ ಪೂಜಾರಿ (29) ಹಾಗೂ ಕುಂದಾಪುರ ಫೆರಿ ರಸ್ತೆಯಲ್ಲಿರುವ ದುರ್ಗಾಂಬಾ ಗ್ಯಾರೇಜ್ ಬಳಿಯ ನಿವಾಸಿ ಸೊಹೆಲ್ (29) ಬಂಧಿತರು.

yogish, sohan

ಕೆಎ 20 ಎಕ್ಸ್ 1098 ನಂಬ್ರದ ಹೀರೊ ಹೊಂಡಾ ಬೈಕ್ ನಲ್ಲಿ ಪಿಸ್ತೂಲ್ ಹಿಡಿದುಕೊಂಡು ಯಡ್ತಾಡಿಯಲ್ಲಿ ತಿರುಗಾಡಿಕೊಂಡಿವಾಗ ಪೊಲೀಸರು ಇವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಬೈಕ್, 7 ಸಜೀವ ಗುಂಡುಗಳು (ರೌಂಡ್ಸ್) ಮತ್ತು 3 ಮೊಬೈಲ್ ಹ್ಯಾಂಡ್ ಸೆಟ್ ವಶಪಡಿಸಿಕೊಳ್ಳಲಾಗಿದೆ.

ಕಾರ್ಯಾಚರಣೆ ನಡೆಸಿದ ಡಿಸಿಐಬಿ ಪೊಲೀಸರು ಪ್ರಕರಣವನ್ನು ಮುಂದಿನ ತನಿಖೆಗಾಗಿ ಬ್ರಹ್ಮಾವರ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಡಿಸಿಐಬಿ ಇನ್ಸ್ ಪೆಕ್ಟರ್ ಟಿ.ಆರ್.ಜೈಶಂಕರ್, ಸಿಬ್ಬಂದಿಗಳಾದ ರವಿಚಂದ್ರ, ಸುರೇಶ, ಚಂದ್ರ ಶೆಟ್ಟಿ, ಸಂತೋಷ್ ಅಂಬಾಗಿಲು, ಸಂತೋಷ ಕುಂದರ್, ಪ್ರವೀಣ, ರಾಘವೇಂದ್ರ ಉಪ್ಪುಂದ, ಥಾಮ್ಸನ್ ಹಾಗೂ ಚಂದ್ರಶೇಖರ್ ಇವರು ಪಾಲ್ಗೊಂಡಿರುತ್ತಾರೆ.

pistul, mobile

 

 

 

Leave a Reply

Your email address will not be published. Required fields are marked *