Realtime blog statisticsweb statistics
udupibits.in
Breaking News
ಉಡುಪಿ: ಅಕ್ರಮ ದಂಧೆಕೋರರಿಂದ ಹಣ ವಸೂಲಿ- ಉಡುಪಿ ನಗರ ಪೊಲೀಸ್ ಠಾಣೆಯ ಎಸ್ ಬಿ ಪಿಸಿ ಮಯ್ಯದ್ದಿ ವಿರುದ್ಧ ದೂರು.

ಶಾಲಾ ವಿದ್ಯಾರ್ಥಿನಿಯ ಅತ್ಯಾಚಾರ ಯತ್ನ: ಗಲ್ಫ್ ಉದ್ಯೋಗಿಯ ಬಂಧನ

ಬದಿಯಡ್ಕ: ಶಾಲಾ ವಿದ್ಯಾರ್ಥಿನಿಯನ್ನು ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದಿದ್ದು, ಈ ಸಂಬಂಧ ಗಲ್ಫ್ ಉದ್ಯೋಗಿಯೊಬ್ಬನನ್ನು ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ.

ಬದಿಯಡ್ಕ ಬಳಿಯ ಮೂಕಂಪಾರೆ ನಿವಾಸಿ ಹುಸೈನ್ (32) ಬಂಧಿತ ಆರೋಪಿ. ಗಲ್ಫ್ ಉದ್ಯೋಗಿಯಾದ ಈತ ಒಂದು ತಿಂಗಳ ಹಿಂದೆ ಊರಿಗೆ ಬಂದಿದ್ದನು. ಬಳಿಕ ಚೆಡೇಕಲ್ ಎಂಬಲ್ಲಿರುವ ಸಹೋದರಿಯ ಮನೆಯಲ್ಲಿ ವಾಸಿಸುತ್ತಿದ್ದನು ಎನ್ನಲಾಗಿದೆ.

ಇತ್ತೀಚೆಗೆ 10ನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿಯೋರ್ವಳನ್ನು ಬಲವಂತವಾಗಿ ಕಾರಿಗೆ ಹತ್ತಿಸಿ ನಿರ್ಜನ ಪ್ರದೇಶಕ್ಕೊಯ್ದು ಬಾಲಕಿಯ ಅತ್ಯಾಚಾರಕ್ಕೆ ಯತ್ನಿಸಿದ್ದ ಎಮದು ದೂರಲಾಗಿದೆ. ಈ ವೇಳೆ ಬೊಬ್ಬಿಟ್ಟು ಆತನ ಕೈಯಿಂದ ತಪ್ಪಿಸಿಕೊಂಡ ಬಾಲಕಿ, ಮನೆಗೆ ಮರಳಿ ಹಿರಿಯರಿಗೆ ವಿಷಯ ತಿಳಿಸಿದ್ದಳು.

ಮನೆಯ ಹಿರಿಯರು ಚೈಲ್ಡ್ ಲೈನ್ ಗೆ ಮಾಹಿತಿ ನೀಡಿದ್ದು, ಚೈಲ್ಡ್ಲೈನ್ ಅಧಿಕಾರಿಗಳ ಆದೇಶಾನುಸಾರ ಬದಿಯಡ್ಕ ಪೊಲೀಸರು ಕೇಸು ದಾಖಲಿಸಿ ಹುಸೈನ್ ನನ್ನು ಬಂಧಿಸಿದ್ದಾರೆ. ಘಟನೆಯ ವೇಳೆ ಬಳಸಿದ ರಿಟ್ಜ್ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *