Realtime blog statisticsweb statistics
udupibits.in
Breaking News
ಉಡುಪಿ: ಅಕ್ರಮ ದಂಧೆಕೋರರಿಂದ ಹಣ ವಸೂಲಿ- ಉಡುಪಿ ನಗರ ಪೊಲೀಸ್ ಠಾಣೆಯ ಎಸ್ ಬಿ ಪಿಸಿ ಮಯ್ಯದ್ದಿ ವಿರುದ್ಧ ದೂರು.

ಬನ್ನಂಜೆ ರಾಜ ಇಂದು ಬೆಳಗಾವಿ ನ್ಯಾಯಾಲಯಕ್ಕೆ: ಮತ್ತೆ ಪೊಲೀಸ್ ಕಸ್ಟಡಿಗೆ ಕೇಳುವ ಸಾಧ್ಯತೆ

ಉಡುಪಿ: ಕುಖ್ಯಾತ ಭೂಗತ ಪಾತಕಿ ಬನ್ನಂಜೆ ರಾಜನ ಪೊಲೀಸ್ ಕಸ್ಟಡಿಯ ಅವಧಿ ಇಂದಿಗೆ ಕೊನೆಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪೊಲೀಸರು ಇಂದು ಸಂಜೆಯೊಳಗೆ ಬೆಳಗಾವಿ ನ್ಯಾಯಾಲಯದಲ್ಲಿ ಹಾಜರುಪಡಿಸಲಿದ್ದಾರೆ.

ಅಂಕೋಲದಲ್ಲಿ ನಡೆದ ಉದ್ಯಮಿ, ಬಿಜೆಪಿ ನಾಯಕ ಎನ್.ಆರ್.ನಾಯಕ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜನನ್ನು ಬೆಳಗಾವಿ ನ್ಯಾಯಾಲಯಕ್ಕೆ ಹಾಜರುಪಡಿಸಿ, ಬಳಿಕ ವಿಚಾರಣೆಗಾಗಿ ಆಗಸ್ಟ್ 28ರ ವರೆಗೆ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿತ್ತು.

ನಾಯಕ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖಾಧಿಕಾರಿ ಉಡುಪಿ ಎಸ್ಪಿ ಅಣ್ಣಾಮಲೈ ಹಾಗೂ ಸಹಾಯಕ ತನಿಖಾಧಿಕಾರಿ ಇನ್ಸ್ ಪೆಕ್ಟರ್ ವೆಂಕಟೇಶ್ ಪ್ರಸನ್ನ ಅವರು ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಉಡುಪಿಯ ಚಂದು ಮೈದಾನದಲ್ಲಿರುವ ಡಿಎಆರ್ ಗೆಸ್ಟ್ ಹೌಸಿನಲ್ಲಿ ಬಿಗಿ ಭದ್ರತೆಯಲ್ಲಿ ವಿಚಾರಣೆ ನಡೆಸಿದ್ದರು.

ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಬೇಕಾಗಿದ್ದುದರಿಂದ, ನಿನ್ನೆ ಬನ್ನಂಜೆ ರಾಜನನ್ನು ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆಗೆ ಒಳಪಡಿಸಲಾಗಿತ್ತು. ಬೆಂಗಳೂರಿನ ಹೆಚ್ಚುವರಿ ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಅವರು ಉಡುಪಿಗೆ ಆಗಮಿಸಿ ಎಸ್ಪಿ ಅಣ್ಣಾಮಲೈ ಜೊತೆಗೆ ಮಾತುಕತೆ ನಡೆಸಿದ್ದರು.

ರಾಜನ ಮೇಲೆ ಉಡುಪಿ, ಮಲ್ಪೆ, ಮಣಿಪಾಲ, ಮಂಗಳೂರು, ಬೆಂಗಳೂರು ಸಹಿತ ವಿವಿಧ ಪೊಲೀಸ್ ಠಾಣೆಗಳಲ್ಲಿ ಇನ್ನೂ ಹಲವಾರು ಮೊಕದ್ದಮೆಗಳು ದಾಖಲಾಗಿದ್ದು, ಇವುಗಳ ಪೈಕಿ ಯಾವುದಾದರು ಒಮದು ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಇಂದು ಬೆಳಗಾವಿ ನ್ಯಾಯಾಲಯದಿಂದ ಮತ್ತೆ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *