Realtime blog statisticsweb statistics
udupibits.in
Breaking News
ಉಡುಪಿ: ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ-ಮಕ್ಕಳ ಆಸ್ಪತ್ರೆಯಲ್ಲಿ ಶಿಶು ಮರಣ ?

ಉಡುಪಿ ಜಿಲ್ಲಾಸ್ಪತ್ರೆಯ ಇಬ್ಬರು ಅಧಿಕಾರಿಗಳಿಗೆ ವರ್ಗಾವಣೆ !

ಉಡುಪಿ: ರಾಜ್ಯದ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಮುಚ್ಚಿ ಹಾಕಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿಯಲ್ಲಿ ನಡೆದ ಬಹುಕೋಟಿ ರಾಸಾಯನಿಕ ಹಗರಣದಲ್ಲಿ ಶಾಮೀಲಾಗಿದ್ದಾರೆ ಎನ್ನಲಾದ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯ ಇಬ್ಬರು ಅಧಿಕಾರಿಗಳಿಗೆ ಹೊರ ಜಿಲ್ಲೆಗಳಿಗೆ ವರ್ಗಾವಣೆಯಾಗಿದೆ.

ಜಿಲ್ಲಾಸ್ಪತ್ರೆಯ ಕಚೇರಿ ಅಧೀಕ್ಷಕರಾದ ಮೋಹನದಾಸ ಕಿಣಿ ಅವರಿಗೆ ಮಂಗಳೂರಿನ ವೆನ್ ಲಾಕ್ ಜಿಲ್ಲಾ ಸರಕಾರಿ ಆಸ್ಪತ್ರೆಗೆ ವರ್ಗಾವಣೆಯಾದರೆ, ಸಯಾಯಕ ಆಡಳಿತಾಧಿಕಾರಿ ಕುಮಾರ ಸ್ವಾಮಿ ಅವರಿಗೆ ಗದಗ ಜಿಲ್ಲೆಯ ಮುಂಡರಗಿಯಲ್ಲಿರುವ ಆಸ್ಪತ್ರೆಗೆ ವರ್ಗಾವಣೆಯಾಗಿದೆ.

ಮೋಹನದಾಸ ಕಿಣಿ ಅವರು ಇಂದು ವೆನ್ ಲಾಕ್ ಆಸ್ಪತ್ರೆಯಲ್ಲಿ ಅಧಿಕಾರ ಸ್ವೀಕರಿಸಿಕೊಂಡಿದ್ದಾರೆ. ಕುಮಾರಸ್ವಾಮಿಯವರಿಗೆ ಉಡುಪಿ ಜಿಲ್ಲಾಸ್ಪತ್ರೆಯಿಂದ ಬಿಡುಗಡೆಯಾಗಲು ಇನ್ನೂ ಒಂದು ವಾರ ಕಾಲಾವಕಾಶ ಇದೆ ಎನ್ನಲಾಗಿದೆ.

Leave a Reply

Your email address will not be published. Required fields are marked *