Realtime blog statisticsweb statistics
udupibits.in
Breaking News
ಉಡುಪಿ: ಅಕ್ರಮ ದಂಧೆಕೋರರಿಂದ ಹಣ ವಸೂಲಿ- ಉಡುಪಿ ನಗರ ಪೊಲೀಸ್ ಠಾಣೆಯ ಎಸ್ ಬಿ ಪಿಸಿ ಮಯ್ಯದ್ದಿ ವಿರುದ್ಧ ದೂರು.

ಹೊಳೆಯಲ್ಲಿ ಮುಳುಗಿ ಕಾಲೇಜು ವಿದ್ಯಾರ್ಥಿಗಳಿಬ್ಬರ ದುರ್ಮರಣ

ಉಡುಪಿ: ಮಿತ್ರರೊಂದಿಗೆ ಈಜಾಡಲು ಹೊಳೆಗಿಳಿದ ಇಬ್ಬರು ಕಾಲೇಜು ವಿದ್ಯಾರ್ಥಿಗಳು, ನೀರಿನ ಸುಳಿಗೆ ಸಿಲುಕಿ ಮುಳುಗಿ ಮೃತಪಟ್ಟ ಘಟನೆ ಅಕ್ಟೋಬರ್ 11ರಂದು ಉಡುಪಿ ತಾಲೂಕು ಶಿರ್ವ ಗ್ರಾಮದ ಬಡಾ ಪಂಜಿಮಾರಿನ ಪಾಪನಾಶಿನಿ ಹೊಳೆಯಲ್ಲಿ ಸಂಭವಿಸಿದೆ.

ಬೆಳ್ಳೆ – ಶಿರ್ವ ಗ್ರಾಮಗಳ ಗಡಿ ಭಾಗದ ಪಾಂಬೂರು ನಿವಾಸಿಗಳಾದ ಅಶ್ನಿನ್ (20) ಹಾಗೂ ಆಸ್ಟಿನ್ (18) ಮೃತ ದುರ್ದೈವಿಗಳು. ಇವರಿಬ್ಬರೂ ಕಾಲೇಜು ವಿದ್ಯಾರ್ಥಿಗಳಾಗಿದ್ದು, ರಜಾ ದಿನವಾಗಿದ್ದ ಕಾರಣ, ಇತರ ಮಿತ್ರರೊಂದಿಗೆ ಈಜಾಡಲು ಹೊಳೆಗಿಳಿದಿದ್ದರು.

ಹೊಳೆಯಲ್ಲಿ ಮುಳುಗಿದ ವಿದ್ಯಾರ್ಥಿಗಳನ್ನು, ಬಳಿಕ ಸ್ಥಳೀಯರು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಮೇಲಕ್ಕೆತ್ತಿದ್ದರು. ಶಿರ್ವ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *