Realtime blog statisticsweb statistics
udupibits.in
Breaking News
ಉಡುಪಿ: ಅಕ್ರಮ ದಂಧೆಕೋರರಿಂದ ಹಣ ವಸೂಲಿ- ಉಡುಪಿ ನಗರ ಪೊಲೀಸ್ ಠಾಣೆಯ ಎಸ್ ಬಿ ಪಿಸಿ ಮಯ್ಯದ್ದಿ ವಿರುದ್ಧ ದೂರು.

ವೃದ್ಧೆ ಕುತ್ತಿಗೆಯಿಂದ ಚಿನ್ನದ ಸರ ಸುಲಿಗೆ: ಸ್ಕೂಟರ್ ಸಹಿತ ಆರೋಪಿಯ ಬಂಧನ

ಉಡುಪಿ: ಉಡುಪಿ ತಾಲೂಕು ಪೆರ್ಣಂಕಿಲ ಸಮೀಪದ ಗುಂಡುಪಾದೆ ಮತ್ತು ಹರಿಖಂಡಿಗೆ ಬಳಿ ವಾರದ ಹಿಂದೆ ನಂಬರ್ ಪ್ಲೇಟ್ ಇಲ್ಲದ ಬಿಳಿ ಬಣ್ಣದ ಹೊಂಡಾ ಆಕ್ಟೀವಾ ಸ್ಕೂಟರ್ ನಲ್ಲಿ ಬಂದು ಒಂಟಿ ವೃದ್ಧೆಯರ ಕುತ್ತಿಗೆಯಿಂದ ಚಿನ್ನದ ಸರಗಳನ್ನು ಸುಲಿಗೆ ಮಾಡಿಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಹಿರಿಯಡ್ಕ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಉಡುಪಿ ತಾಲೂಕು ಬೆಳ್ಳಂಪಳ್ಳಿ ಗ್ರಾಮದ ನಿವಾಸಿ ಕುಶಾಲ್ ಶೆಟ್ಟಿಯವರ ಪುತ್ರ ಪ್ರಶಾಂತ್ ಶೆಟ್ಟಿ (31) ಬಂಧಿತ ಆರೋಪಿ. ಈತ ಸುಲಿಗೆ ಮಾಡಿದ್ದ 68 ಗ್ರಾಂ ತೂಕದ 2.10 ಲಕ್ಷ ರು. ಮೌಲ್ಯದ ಚಿನ್ನಾಭರಣ ಮತ್ತು ಸುಲಿಗೆ ಕೃತ್ಯಕ್ಕೆ ಉಪಯೋಗಿಸಿದ ಹೊಂಡಾ ಆಕ್ಟೀವಾ ಸ್ಕೂಟರ್ ನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *