Realtime blog statisticsweb statistics
udupibits.in
Breaking News
ಉಡುಪಿ: ಅಕ್ರಮ ದಂಧೆಕೋರರಿಂದ ಹಣ ವಸೂಲಿ- ಉಡುಪಿ ನಗರ ಪೊಲೀಸ್ ಠಾಣೆಯ ಎಸ್ ಬಿ ಪಿಸಿ ಮಯ್ಯದ್ದಿ ವಿರುದ್ಧ ದೂರು.

ಕಾರು ಡಿಕ್ಕಿ: ಶಾಲಾ ಬಾಲಕಿಗೆ ಗಂಭೀರ ಗಾಯ

ಉಡುಪಿ: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಶಾಲಾ ಬಾಲಕಿಗೆ ಡಿಕ್ಕಿ ಹೊಡೆದ ಉಡುಪಿ ಕಡೆಯಿಂದ ಬ್ರಹ್ಮಾವರ ಕಡೆಗೆ ಸಂಚರಿಸುತ್ತಿದ್ದ ಬಿಳಿ ಬಣ್ಣದ ರಿಟ್ಜ್ ಕಾರನ್ನು, ಬಳಿಕ ಚಾಲಕ ಸ್ಥಳದಲ್ಲಿ ನಿಲ್ಲಿಸದೆ ಪರಾರಿಯಾಗುವ ಮುಖಾಂತರ ಅಮಾನವೀಯತೆ ಮೆರೆದ ಪ್ರಕರಣ ರಾಷ್ಟ್ರೀಯ ಹೆದ್ದಾರಿ 66ರ ನಿಟ್ಟೂರು ಬಳಿ ಸಂಭವಿಸಿದೆ.
ಸಾಮಾಜಿಕ ಕಾರ್ಯಕರ್ತರಾದ ನಿಟ್ಟೂರು ನಿವಾಸಿ ರಸೂಲ್ ಸಾಹೇಬ್ ಕಟಪಾಡಿ ಇವರ ಪುತ್ರಿ ರಿಹಾ ಗಾಯಾಳುವಾಗಿದ್ದು, ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜನವರಿ 27ರ ಸಂಜೆ ಗಂಟೆ 4.18ಕ್ಕೆ ಘಟನೆ ನಡೆದಿದೆ. ರಿಹಾ, ಹೂಡೆಯ ಸಾಲಿಹಾತ್ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ.
ಈ ಬಗ್ಗೆ, ರಸೂಲ್ ಅವರು ನೀಡಿದ ದೂರಿನಂತೆ ಉಡುಪಿ ಸಂಚಾರಿ ಠಾಣೆಯ ಪೊಲೀಸರು ಕಾರು ಚಾಲಕನ ವಿರುದ್ಧ ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *