Realtime blog statisticsweb statistics
udupibits.in
Breaking News
ಉಡುಪಿ: ನೌಕರರಿಗೆ ಕಿರುಕುಳ ಆರೋಪ- ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಮಹೇಶ್ ಐತಾಳ್ ಅಮಾನತಿಗೆ ಶ್ರೀರಾಮ ದಿವಾಣ ಒತ್ತಾಯ

ಕರ್ನಾಟಕದ ಕಾರ್ಮಿಕರ ಹೆಸರು ಕೇರಳದ ಮತಪಟ್ಟಿಯಲ್ಲಿ: ಚುನಾವಣಾ ಆಯೋಗಕ್ಕೆ ದೂರು

ಕುಂಬಳೆ: ಕುಂಬಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಲವು ಮತಗಟ್ಟೆಗಳಲ್ಲಿ ಹೊರ ರಾಜ್ಯದ ಕಾರ್ಮಿಕರನ್ನು ವ್ಯಾಪಕ ಪ್ರಮಾಣದಲ್ಲಿ ಮತಪಟ್ಟಿಗೆ ಸೇರಿಸಲಾಗಿದೆ ಎಂದು ದೂರುಗಳು ಕೇಳಿ ಬಂದಿದ್ದು, ಈ ಬಗ್ಗೆ ಸಮಗ್ರ ತನಿಖೆಗೆ ಒತ್ತಾಯಿಸಿ ಕುಂಬಳೆ ಮಂಡಲ ಕಾಂಗ್ರೆಸ್ ಅಧ್ಯಕ್ಷ ಗಣೇಶ್ ಭಂಡಾರಿ ಕುತ್ತಿಕ್ಕಾರ್ ಕೇರಳ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.

ಕುಂಬಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧೆಡೆಗಳಲ್ಲಿ ಕೂಲಿ ಕಾರ್ಮಿಕರಾಗಿ ದುಡಿಯುತ್ತಿರುವ ಹಾಸನ, ಬೀದರ್, ರಾಯಚೂರು ಮೊದಲಾದೆಡೆಗಳ ನೂರಾರು ಮಂದಿ ಕಾರ್ಮಿಕರನ್ನು ಚುನಾವಣೆಯ ಹಿನ್ನೆಲೆಯಲ್ಲಿ ಅಕ್ರಮವಾಗಿ ಮತದಾರರನ್ನಾಗಿ ಸೇರ್ಪಡೆಗೊಳಿಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಕೇರಳದ ಮತಪಟ್ಟಿಯಲ್ಲಿ ಮತದಾರರಾಗಿರುವ ಇವರು, ಕರ್ನಾಟಕ ರಾಜ್ಯದಲ್ಲೂ ಮತದಾರರಾಗಿದ್ದಾರೆ. ಪ್ರಸ್ತುತ ಕೇರಳದ ವಿವಿಧೆಡೆಗಳಲ್ಲಿ ಇವರು ಕೂಲಿ ಕಾರ್ಮಿಕರಾಗಿ ದುಡಿಯುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ಮತದಾರರ ಪಟ್ಟಿಗೆ ಸೇರಿಸಿ ಅಕ್ರಮವಾಗಿ ಮತ ಪಡೆಯಲು ಯತ್ನಿಸಲಾಗಿದೆ ಎಂದು ದೂರಲಾಗಿದೆ.

Leave a Reply

Your email address will not be published. Required fields are marked *