Realtime blog statisticsweb statistics
udupibits.in
Breaking News
ಉಡುಪಿ: ಅಕ್ರಮ ದಂಧೆಕೋರರಿಂದ ಹಣ ವಸೂಲಿ- ಉಡುಪಿ ನಗರ ಪೊಲೀಸ್ ಠಾಣೆಯ ಎಸ್ ಬಿ ಪಿಸಿ ಮಯ್ಯದ್ದಿ ವಿರುದ್ಧ ದೂರು.

ಅರ್ಜಿದಾರರಿಗೆ ಕೂಡಲೇ ಮಾಹಿತಿ ನೀಡಲು ಆರೋಗ್ಯ ಇಲಾಖಾ ಪ್ರಧಾನ ಕಾರ್ಯದರ್ಶಿ ಕಚೇರಿಯ ಪಿಐಒ, ಎಫ್ಎಎಗೆ ಆಯೋಗ ಆದೇಶ

ಉಡುಪಿ: ಮಾಹಿತಿ ಹಕ್ಕು ಅಧಿನಿಯಮ 2005ರಂತೆ ಅಗತ್ಯ ಮಾಹಿತಿ ಕೋರಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ ಕೂಡಲೇ ಕೋರಿದ ಮಾಹಿತಿಯನ್ನು ನೀಡುವಂತೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಗಳ ಕಚೇರಿಯ ಸಾರ್ವಜನಿಕ ಮಾಹಿತಿ ಅಧಿಕಾರಿ ಹಾಗೂ ಮೊದಲ ಮೇಲ್ಮನವಿ ಪ್ರಾಧಿಕಾರಕ್ಕೆ ಕರ್ನಾಟಕ ಮಾಹಿತಿ ಆಯೋಗದ 4ನೇ ಕೋರ್ಟಿನ ರಾಜ್ಯ ಮಾಹಿತಿ ಆಯುಕ್ತರಾದ ಎನ್.ಪಿ.ರಮೇಶ್ ಅವರು ಸ್ಪಷ್ಟ ನಿರ್ದೇಶನ ನೀಡಿ ಆದೇಶಿಸಿದ್ದಾರೆ.

ಉಡುಪಿಯ ಮಾಹಿತಿ ಹಕ್ಕು ಕಾರ್ಯಕರ್ತರಾದ ಶ್ರೀರಾಮ ದಿವಾಣ ಅವರು ಅಗತ್ಯ ಮಾಹಿತಿ ಕೋರಿ 2014ರ ನವೆಂಬರ್ 1ರಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಗಳ ಕಚೇರಿಯ ಸಾರ್ವಜನಿಕ ಮಾಹಿತಿ ಅಧಿಕಾರಿಯವರಿಗೆ ಮಾಹಿತಿ ಕೋರಿ ಅರ್ಜಿ ಸಲ್ಲಿಸಿದ್ದರು. ಸಾರ್ವಜನಿಕ ಮಾಹಿತಿ ಅಧಿಕಾರಿಯಾಗಿದ್ದ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಕೆ.ವಿ.ರಾಮಪ್ಪ ಅವರು ನವೆಂಬರ್ 20ರಂದು ಶ್ರೀರಾಮ ದಿವಾಣರಿಗೆ ಪತ್ರ ಬರೆದು, ಮಾಹಿತಿ ನೀಡಲು ನಿರಾಕರಿಸಿದ್ದರು.

ಕೋರಿದ ಮಾಹಿತಿಯನ್ನು ನೀಡಲು ಸಾರ್ವಜನಿಕ ಮಾಹಿತಿ ಅಧಿಕಾರಿ ನಿರಾಕರಿಸಿದ ಕಾರಣ, ಅರ್ಜಿದಾರರು 2015ರ ಜನವರಿ 5ರಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮೊದಲ ಮೇಲ್ಮನವಿ ಪ್ರಾಧಿಕಾರವಾಗಿರುವ ಸರಕಾರದ ಉಪ ಕಾರ್ಯದರ್ಶಿ- 2 ಇವರಿಗೆ ಮೊದಲ ಮೇಲ್ಮನವಿ ಸಲ್ಲಿಸಿದ್ದರು.

ಮೊದಲ ಮೇಲ್ಮನವಿ ಪ್ರಾಧಿಕಾರವೂ ನಿಗದಿತ ಅವಧಿಯಲ್ಲಿ ಮಾಹಿತಿ ಒದಗಿಸದ ಹಿನ್ನೆಲೆಯಲ್ಲಿ, ಪ್ರಕರಣದ ವಿಚಾರಣೆ ನಡೆಸಿ ಅರ್ಜಿಯನ್ನು ಇತ್ಯರ್ಥ ಪಡಿಸದ ಕಾರಣ ಅರ್ಜಿದಾರರು ಜೂನ್ 14ರಂದು ಕರ್ನಾಟಕ ಮಾಹಿತಿ ಆಯೋಗಕ್ಕೆ ಎರಡನೇ ಮೇಲ್ಮನವಿ ಸಲ್ಲಿಸಿದ್ದರು.

2016ರ ನವೆಂಬರ್ 21ರಂದು ಪ್ರರಕಣದ ವಿಚಾರಣೆ ನಡೆಸಿದ ಕೋರ್ಟ್ 4ರ ರಾಜ್ಯ ಮಾಹಿತಿ ಆಯುಕ್ತರು, ಅರ್ಜಿದಾರರಿಗೆ ಕೂಡಲೇ ಕೋರಿದ ಮಾಹಿತಿಯನ್ನು ಕಳುಹಿಸಿಕೊಡುವಂತೆ ಸ್ಪಷ್ಟ ನಿರ್ದೇಶನ ನೀಡಿ ಆದೇಶಿಸಿದರು.

karnataka-information-commi

Leave a Reply

Your email address will not be published. Required fields are marked *