Realtime blog statisticsweb statistics
udupibits.in
Breaking News
ಉಡುಪಿ: ಜಿಲ್ಲೆಯ 20 ಮಂದಿ ಗ್ರಾಮ ಲೆಕ್ಕಾಧಿಕಾರಿಗಳಿಗೆ (ವಿಎ) ವರ್ಗಾವಣೆ

ಕೆಥೋಲಿಕ್ ಶಿಕ್ಷಣ ಮಂಡಳಿಯಿಂದ ಪಕ್ಷಪಾತ, ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ನಿಯಮ ಉಲ್ಲಂಘನೆ, ಅಕ್ರಮ, ಗೊಂದಲ !

ಉಡುಪಿ: ಉಡುಪಿ ತಾಲೂಕು ಮೂಡುಬೆಳ್ಳೆಯ ಸಂತ ಲಾರೆನ್ಸ್ ಪದವಿಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲರನ್ನಾಗಿ ಕಾಲೇಜಿನ ಸೇವಾ ಜೇಷ್ಠತೆಯಲ್ಲಿ 3ನೇ ಸ್ಥಾನದಲ್ಲಿರುವವರನ್ನು ಸಂಸ್ಥೆಯ ಆಡಳಿತ ಮಂಡಳಿಯು ನೇಮಕ ಮಾಡಿರುವುದರಿಂದ, ಈ ನೇಮಕವನ್ನು ಪದವಿಪೂರ್ವ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ಅನುಮೋದನೆ ನೀಡಿದ ಕಾರಣ ಮತ್ತು ಕಾಲೇಜನ್ನು ಮತೀಯ ಅಲ್ಪಸಂಖ್ಯಾತ ಸಂಸ್ಥೆ ಎಂದು ಇಲಾಖೆ ಇನ್ನೂ ಸಹ ಘೋಷಣೆ ಮಾಡದೆ ಇರುವ ಹಿನ್ನೆಲೆಯಲ್ಲಿ ಕಾಲೇಜಿನ ಪ್ರಭಾರ ಪ್ರಾಂಶುಪಾಲರ ನೇಮಕಾತಿಯಲ್ಲಿ ಗೊಂದಲವೇರ್ಪಟ್ಟಿದೆ ಹಾಗೂ ಈ ಸಂಬಂಧ ದೂರು, ಮಾಹಿತಿ ಹಕ್ಕು ಅರ್ಜಿ ಇತ್ಯಾದಿಗಳಿಂದಾಗಿ ಇಲಾಖೆಯ ಅಮೂಲ್ಯ ಸಮಯ ಹಾಳಾಗುತ್ತಿದೆ ಎಂದು ಪದವಿಪೂರ್ವ ಹಾಗೂ ವೃತ್ತಿ ಶಿಕ್ಷಣ ಇಲಾಖೆಯ ಉಡುಪಿ ಜಿಲ್ಲಾ ಉಪನಿರ್ದೇಶಕರು ಜಂಟಿ ನಿರ್ದೇಶಕರಿಗೆ ಸಲ್ಲಿಸಿದ ವರದಿಯಲ್ಲಿ ಅಸಮಾಧಾನವ್ಯಕ್ತಪಡಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಸಂತ ಲಾರೆನ್ಸ್ ಪದವಿಪೂರ್ವ ಕಾಲೇಜಿನಲ್ಲಿ ಒಟ್ಟು 6 ಮಂದಿ ಉಪನ್ಯಾಸಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸಂಸ್ಥೆಯ ಆಡಳಿತ ಮಂಡಳಿಯು ಪ್ರಭಾರ ಪ್ರಾಂಶುಪಾಲರನ್ನಾಗಿ ಸೇವಾ ಜೇಷ್ಠತೆಯಲ್ಲಿ 3ನೇ ಸ್ಥಾನದಲ್ಲಿರುವ ಇತಿಹಾಸ ಉಪನ್ಯಾಸಕರಾದ ನವೀನ್ ಕೊರೆಯಾ ಇವರನ್ನು ನೇಮಕ ಮಾಡಿದೆ ಮತ್ತು ಸರಕಾರದ 2014 ಜೂನ್ 18ರ ಆದೇಶದಂತೆ ಸಂಸ್ಥೆಯನ್ನು ಮತೀಯ ಅಲ್ಪಸಂಖ್ಯಾತ ಸಂಸ್ಥೆ ಎಂದು ಘೋಷಿಸಲಾಗಿಲ್ಲ ಎಂಬ ವರದಿಯನ್ನು ಸಲ್ಲಿಸಲಾಗಿದ್ದರೂ, ಜಂಟಿ ನಿರ್ದೇಶಕ (ಮಾನ್ಯತೆ ಮತ್ತು ಅನುದಾನ)ರು ಈ ಅಂಶಗಳನ್ನು ಪರಿಗಣಿಸದೆಯೇ ಪ್ರಭಾರ ಪ್ರಾಂಶುಪಾಲರನ್ನಾಗಿ ಸೇವಾ ಜೇಷ್ಠತೆಯಲ್ಲಿ 3ನೇ ಸ್ಥಾನದಲ್ಲಿರುವ ನವೀನ್ ಕೊರೆಯಾ ಇವರನ್ನು ನೇಮಕ ಮಾಡಿದ ಆಡಳಿತ ಮಂಡಳಿಯ ಪ್ರಸ್ತಾವನೆಗೆ ಅನುಮೋದನೆ ನೀಡಿದ್ದಾರೆ ಎಂಬುದನ್ನು ತಮ್ಮ ವರದಿಯಲ್ಲಿ ಉಪನಿರ್ದೇಶಕ ಸ್ಪಷ್ಟಪಡಿಸಿದ್ದಾರೆ.

ಕಾಲೇಜಿನಲ್ಲಿ ಕಳೆದ 32 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಸಂಖ್ಯಾಶಾಸ್ತ್ರ ಉಪನ್ಯಾಸಕರಾದ ಎಚ್.ದೇವರಾಯ ಶ್ಯಾನುಭೋಗ್ ರವರು 2020ರ ನವೆಂಬರ್ 30ರಂದು ನಿವೃತ್ತಿಯಾಗಲಿದ್ದು, ಸೇವಾ ಜೇಷ್ಠತೆಯಲ್ಲಿ ಹಿರಿಯರಾದ ಇವರನ್ನು ಕಾಲೇಜಿನ ಪ್ರಭಾರ ಪ್ರಾಂಶುಪಾಲರನ್ನಾಗಿ ನೇಮಕ ಮಾಡುವುದು ಸೂಕ್ತ ಎಂದು 2017ರ ಜನವರಿ 27ರಂದು ಜಂಟಿ ನಿರ್ದೇಶಕರಿಗೆ ಸಲ್ಲಿಸಿದ ಪ್ರಸ್ತಾವನೆಯಲ್ಲಿ ಉಪನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ.

ಪದವಿಪೂರ್ವ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ಹಾಗೂ ಉಪನಿರ್ದೇಶಕರ ನಡುವಿನ ಪತ್ರ ವ್ಯವಹಾರವನ್ನು ಪರಿಶೀಲಿಸಿದಾಗ, ಕಾಲೇಜು ಆಡಳಿತ ಮಂಡಳಿಯಾದ ಕೆಥೋಲಿಕ್ ಶಿಕ್ಷಣ ಮಂಡಳಿಯು ನಿಯಮಾವಳಿ ಉಲ್ಲಂಘಿಸಿರುವುದು ಮತ್ತು ಸಹಜ ನ್ಯಾಯಕ್ಕೆ ಬೆಲೆಕೊಡದೆ ಪಕ್ಷಪಾತ ಎಸಗಿರುವುದು ಮತ್ತು ಜಂಟಿ ನಿರ್ದೇಶಕರು ಯಾವುದೋ ಅಮಿಷ ಹಾಗೂ ಯಾರದೋ ಒತ್ತಡಕ್ಕೆ ಒಳಗಾಗಿರುವುದು, ಅಕ್ರಮದಲ್ಲಿ ಶಾಮೀಲಾಗಿರಬಹುದೆಂಬ ಶಂಕೆ ಬಲವಾಗುತ್ತದೆ.

 

Leave a Reply

Your email address will not be published. Required fields are marked *