Realtime blog statisticsweb statistics
udupibits.in
Breaking News
ಉಡುಪಿ: ಅಕ್ರಮ ದಂಧೆಕೋರರಿಂದ ಹಣ ವಸೂಲಿ- ಉಡುಪಿ ನಗರ ಪೊಲೀಸ್ ಠಾಣೆಯ ಎಸ್ ಬಿ ಪಿಸಿ ಮಯ್ಯದ್ದಿ ವಿರುದ್ಧ ದೂರು.

ಬಹುಕೋಟಿ ರಾಸಾಯನಿಕ ಹಗರಣದ ಕಡತಕ್ಕೆ ಮರು ಚಾಲನೆ: ನಿಯಂತ್ರಣಾಧಿಕಾರಿಯಿಂದ ಮಾಹಿತಿ ಕೋರಿದ ಆಯುಕ್ತರು

ಉಡುಪಿ: ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು 2012ರಿಂದ ರಾಜ್ಯದ 19 ಜಿಲ್ಲೆಗಳ ಆಸ್ಪತ್ರೆಗಳ ಪ್ರಯೋಗ ಶಾಲೆಗಳಿಗಾಗಿ ಖರೀದಿಸಿದ ಬಹುಕೋಟಿ ಮೊತ್ತದ ರಾಸಾಯನಿಕ ಮತ್ತು ರಕ್ತ ಶೇಖರಣಾ ಟ್ಯೂಬ್ ಗಳ ಖರೀದಿ ಪ್ರಕ್ರಿಯೆಯಲ್ಲಿ ನಡೆದ ಭಾರೀ ಹಗರಣದ ಬಗ್ಗೆ ಅಧಿಕೃತವಾಗಿ ಮುಚ್ಚಿ ಹಾಕಲಾದ ಪ್ರಕರಣಕ್ಕೆ ಇದೀಗ ಮತ್ತೆ ಮರುಜೀವ ಬಂದಿದ್ದು, ಕಡತಕ್ಕೆ ಪುನಹ ಚಾಲನೆ ನೀಡಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖೆಯ ನಿಯಂತ್ರಣಾಧಿಕಾರಿಗಳಿಂದ ಮಾಹಿತಿ ಕೋರಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯದ ಆಡಳಿತಾಧಿಕಾರಿ (ಸಾಮಾನ್ಯ)ಗಳು ದೂರುದಾರರಾದ ಶ್ರೀರಾಮ ದಿವಾಣ ಅವರಿಗೆ ಮಾಹಿತಿ ನೀಡಿದ್ದಾರೆ.

ಬಿಜೆಪಿ ಸರಕಾರದ ಅವಧಿಯಲ್ಲಿ ಆರಂಭವಾಗಿ, ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಮುಂದುವರಿದು, ಆರೋಗ್ಯ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಯಾಗಿದ್ದ ಮದನ್ ಗೋಪಾಲ್ ಐಎಎಸ್ ಹಾಗೂ ಆರೋಗ್ಯ ಸಚಿವರಾಗಿದ್ದ ಯು.ಟಿ.ಖಾದರ್ ಅವರು, ಈ ಬಹುಕೋಟಿ ಮೊತ್ತದ ರಾಸಾಯನಿಕ ಮತ್ತು ರಕ್ತ ಶೇಖರಣಾ ಟ್ಯೂಬ್ ಗಳ ಖರೀದಿ ಹಗರಣವನ್ನು ಅತ್ಯಂತ ವ್ಯವಸ್ಥಿತವಾಗಿ ಮತ್ತು ಅಧಿಕೃತವಾಗಿ ಮುಚ್ಚಿಹಾಕಿದ್ದರು.

ಈ ಎಲ್ಲಾ ಬೆಳವಣಿಗೆಗಳ ಬಳಿಕ, ಮಾಹಿತಿ ಹಕ್ಕು ಕಾರ್ಯಕರ್ತರೂ, www.udupibits.in ಸಂಪಾದಕರೂ ಆದ ಶ್ರೀರಾಮ ದಿವಾಣ ಅವರು, 2106ರ ನವೆಂಬರ್ 22ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ, ಆರೋಗ್ಯ ಸಚಿವರಾದ ರಮೇಶ್ ಕುಮಾರ್, ಸರಕಾರದ ಪ್ರಧಾನ ಕಾರ್ಯದರ್ಶಿಗಳು, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಗಳು,  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯದ ಸರಕಾರದ ಆಯುಕ್ತರಿಗೆ ದೂರರ್ಜಿ ಸಲ್ಲಿಸಿ, ಮುಚ್ಚಿ ಹಾಕಲಾದ ರಾಸಾಯನಿಕ ಖರೀದಿ ಹಗರಣವನ್ನು ಉನ್ನತ ಮಟ್ಟದ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿದ್ದರು.

ಸರಕಾರದ ಪ್ರಧಾನ ಕಾರ್ಯದರ್ಶಿಗಳು ಶ್ರೀರಾಮ ದಿವಾಣರವರು ಸಲ್ಲಿಸಿದ ದೂರರ್ಜಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ಸೂಕ್ತ ಕ್ರಮಕ್ಕಾಗಿ ಕಳುಹಿಸಿಕೊಟ್ಟಿದ್ದರು. ಆರೋಗ್ಯ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಗಳು, ‘ಅಧಿಕಾರ ಪ್ರತ್ಯಾ ಯೋಜನೆಯಡಿಯಲ್ಲಿ ನಿಯಮಾನುಸಾರ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ’ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯದ ಆಯುಕ್ತರಿಗೆ ನಿರ್ದೇಶನ ನೀಡಿದ್ದರು. ಇದರಂತೆ, ಆಯಕ್ತರು ಇದೀಗ ಕಡತಕ್ಕೆ ಮರು ಚಾಲನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *