Realtime blog statisticsweb statistics
udupibits.in
Breaking News
ಉಡುಪಿ: ಜೂನ್ 6 ಬೆಳಗ್ಗೆ 11ಕ್ಕೆ ಉಡುಪಿ ಡಿಸಿ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಮಾಹಿತಿ ಆಯೋಗದಿಂದ ಮಾಹಿತಿ ಹಕ್ಕು ಅರ್ಜಿಗಳ ವಿಚಾರಣೆ.

ಫೆಬ್ರವರಿ 23: ಮಂಗಳೂರಲ್ಲಿ ಸ್ವಾತಂತ್ರ್ಯಯೋಧ, ಕಾರ್ಮಿಕ ನಾಯಕ, ಸಮಾಜವಾದಿ ಹೋರಾಟಗಾರ ಡಾ//ಅಮ್ಮೆಂಬಳ ಬಾಳಪ್ಪರ 96ನೇ ಜನ್ಮದಿನಾಚರಣೆ ಕಾರ್ಯಕ್ರಮ

ಮಂಗಳೂರು: ಸ್ವಾತಂತ್ರ್ಯ ಯೋಧ, ಕಾರ್ಮಿಕ ನಾಯಕ, ಸಮಾಜವಾದಿ ಹೋರಾಟಗಾರ ಡಾ//ಅಮ್ಮೆಂಬಳ ಬಾಳಪ್ಪ ಅವರ 96ನೇ ಜನ್ಮ ದಿನಾಚರಣೆ ಕಾರ್ಯಕ್ರಮವು ‘ಡಾ//ಅಮ್ಮೆಂಬಳ ಬಾಳಪ್ಪ ಸ್ಮಾರಕ ಸೇವಾ ಪ್ರತಿಷ್ಠಾನ (ರಿ) ಬಂಟ್ವಾಳ ಇದರ ವತಿಯಿಂದ ಫೆಬ್ರವರಿ 23 ಶುಕ್ರವಾರ ಬೆಳಗ್ಗೆ ಗಂಟೆ 10.30ಕ್ಕೆ ಮಂಗಳೂರು ನಗರದ ಪೊಲೀಸ್ ಲೇನ್ ನ ಶ್ರೀ ದೇವಿ ದೇವಸ್ಥಾನ ಬಳಿಯ ನಾಸಿಕ್ ಬಿ.ಎಚ್.ಬಂಗೇರ ಸಭಾ ಭವನದಲ್ಲಿ ಜರುಗಲಿದೆ.

ಅಮ್ಮೆಂಬಳ ಬಾಳಪ್ಪ ಸ್ಮಾರಕ ಪ್ರತಿಷ್ಠಾನದ ಅಧ್ಯಕ್ಷರಾದ ಹಿರಿಯ ಸಮಾಜವಾದಿ, ಪತ್ರಕರ್ತ ಅಮ್ಮಂಬಳ ಆನಂದ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರಂಭವನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಎ.ಸಿ.ಭಂಡಾರಿ ಅವರು ಉದ್ಘಾಟಿಸಲಿದ್ದಾರೆ.

‘ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಕರಾವವಳಿಯ ಪಾತ್ರ’ ಎಂಬ ವಿಷಯದಲ್ಲಿ ಗಣಪತಿ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ, ಖ್ಯಾತ ಲೇಖಕಿ ಪ್ರೊ.ಚಂದ್ರಕಲಾ ನಂದಾವರ ಅವರು ವಿಶೇಷ  ಉಪನ್ಯಾಸ ಮಾಡಲಿದ್ದಾರೆ. ಕರ್ನಾಟಕ ರಾಜ್ಯ ಕುಂಬಾರರ ಮಹಾಸಂಘ (ರಿ)ದ ಕಾರ್ಯಾಧ್ಯಕ್ಷರಾದ ಡಾ.ಅಣ್ಣಯ್ಯ ಕುಲಾಲ್, udupibits.in ಜಾಲತಾಣದ ಸಂಪಾದಕರಾದ ಶ್ರೀರಾಮ ದಿವಾಣ ಹಾಗೂ ದ.ಕ.ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಸಂಘದ ಅಧ್ಯಕ್ಷರಾದ ಸುಜೀರ್ ಶ್ರೀಧರ್ ಕುಡುಪು ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

 

 

Leave a Reply

Your email address will not be published. Required fields are marked *