Realtime blog statisticsweb statistics
udupibits.in
Breaking News
ಉಡುಪಿ: ನೌಕರರಿಗೆ ಕಿರುಕುಳ ಆರೋಪ- ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಮಹೇಶ್ ಐತಾಳ್ ಅಮಾನತಿಗೆ ಶ್ರೀರಾಮ ದಿವಾಣ ಒತ್ತಾಯ

ಮಿಲಾಗ್ರಿಸ್ ಕಾಲೇಜಿನಲ್ಲಿ ಮಾಹಿತಿ ಹಕ್ಕು ಉಪನ್ಯಾಸ

ಉಡುಪಿ: ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ಎಸ್ ಸಿ/ಎಸ್ ಟಿ ಸೆಲ್ ವತಿಯಿಂದ ಇತ್ತೀಚೆಗೆ ಕಾಲೇಜಿನಲ್ಲಿ ಮಾಹಿತಿ ಹಕ್ಕು ಕಾಯ್ದೆ ಬಗ್ಗೆ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಮಾಹಿತಿ ಹಕ್ಕು ಕಾರ್ಯಕರ್ತ ಶ್ರೀರಾಮ ದಿವಾಣ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಇಂಗ್ಲೀಷ್ ವಿಭಾಗದ ಮುಖ್ಯಸ್ಥರೂ, ಎಸ್ ಸಿ/ಎಸ್ ಟಿ ಸೆಲ್ ಸಂಯೋಜಕರೂ ಆದ ಪ್ರೊ.ಸಿರಿಲ್ ಮಥಾಯಸ್ ಅಧ್ಯಕ್ಷತೆ ವಹಿಸಿದ್ದರು. ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ.ಜಯರಾಮ ಶೆಟ್ಟಿಗಾರ್ ಹಾಗೂ ಸೆಲ್ ಅಧ್ಯಕ್ಷ-ಕಾರ್ಯದರ್ಶಿ ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೆ ಮೊದಲು ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

Leave a Reply

Your email address will not be published. Required fields are marked *