Realtime blog statisticsweb statistics
udupibits.in
Breaking News
ಉಡುಪಿ: ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ-ಮಕ್ಕಳ ಆಸ್ಪತ್ರೆಯಲ್ಲಿ ಶಿಶು ಮರಣ ?

ಸರಕಾರಿ ಆಸ್ಪತ್ರೆ ಖಾಸಗೀಕರಣ ಹಗರಣ-ಹ್ಯೂಬ್ಲೋಟ್ ವಾಚ್ ಪ್ರಕರಣ: ಸಿಬಿಐ ತನಿಖೆಗೆ ಒಪ್ಪಿಸಲು ಒತ್ತಾಯಿಸಿ ಶಿವಸೇನೆ ಪ್ರತಿಭಟನೆ

ಉಡುಪಿ: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನೂರು ಕೋಟಿ ರೂ. ಬೆಲೆಬಾಳುವ ಜಮೀನು ಸಹಿತ ಉಡುಪಿಯ ಹೃದಯ ಭಾಗದಲ್ಲಿರುವ ಸರಕಾರಿ ಮಹಿಳೆಯರ ಮತ್ತು ಮಕ್ಕಳ ಆಸ್ಪತ್ರೆಯನ್ನು ಅನಿವಾಸಿ ಉದ್ಯಮಿ ಬಿ.ಆರ್.ಶೆಟ್ಟಿ ಅವರಿಗೆ ನೀಡಿದ್ದು, ಟೆಂಡರ್ ಕರೆಯದೆ ನಡೆಸಿದ ಈ ಒಪ್ಪಂದ ಮತ್ತು ಹಸ್ತಾಂತರ ಪ್ರಕ್ರಿಯೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿರುವುದರಿಂದ, ಈ ಹಗರಣದ ತನಿಖೆಯನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿ ಶಿವಸೇನೆಯು ಮೇ 24ರಂದು ಉಡುಪಿಯ ‘ಕರ್ನಾಟಕ ಸರಕಾರ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ-ಮಕ್ಕಳ ಆಸ್ಪತ್ರೆ’ ಮುಂಭಾಗದಲ್ಲಿ ನಡೆದ ಪ್ರತಿಭಟನಾ ಸಭೆ ನಡೆಸಿತು.

ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ 75 ಲಕ್ಷ ಮೌಲ್ಯದ ಹ್ಯೂಬ್ಲೋಟ್ ವಾಚ್ ನ್ನು ಅಕ್ರಮವಾಗಿ ಪಡೆದ ಬಗ್ಗೆ ತಾವೇ ಸ್ವತಹಾ ಪ್ರಸ್ತಾಪಿಸಿದ್ದು, ವಿಧಾನಸಭೆಯಲ್ಲೂ ಧ್ವನಿ ಎತ್ತಿದ್ದೀರಿ. ಉಡುಪಿಯ ಸರಕಾರಿ ಆಸ್ಪತ್ರೆಯನ್ನು ಜಮೀನು ಸಹಿತವಾಗಿ ಉದ್ಯಮಿಗೆ ಹಸ್ತಾಂತರಿಸಿದ ಪ್ರಕ್ರಿಯೆಯಲ್ಲಿ ಲಂಚವಾಗಿ ಹ್ಯೂಬ್ಲೋಟ್ ವಾಚ್ ಪಡೆದುಕೊಳ್ಳಲಾಗಿದೆ ಎಂಬ ಆರೋಪಗಳೂ ವ್ಯಾಪಕವಾಗಿ ಕೇಳಿಬರುತ್ತಿದ್ದು, ಈ ಎಲ್ಲಾ ಅಂಶಗಳು ಸಿಬಿಐ ತನಿಖೆಯಿಂದ ಮಾತ್ರ ಹೊರಬರಲು ಸಾಧ್ಯ. ಆದುದರಿಂದ, ಹಗರಣದ ತನಿಖೆಯನ್ನು ಕೂಡಲೇ ಸಿಬಿಐಗೆ ಒಪ್ಪಸಿಬೇಕು ಎಂದು ಶಿವಸೇನೆಯು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸಲ್ಲಿಸಿದ ಮನವಿಯಲ್ಲಿ ಆಗ್ರಹಿಸಿದೆ.

ಬಿ.ಆರ್.ಶೆಟ್ಟಿಯವರು ಆಸ್ಪತ್ರೆಗೆ ಸಂಬಂಧಿಸಿದಂತೆ ಒಪ್ಪಂದದಂತೆ ನಡೆದುಕೊಂಡಿಲ್ಲ. ಆಸ್ಪತ್ರೆ ಇನ್ನೂ ಸಹ ಪೂರ್ಣ ಪ್ರಮಾಣದಲ್ಲಿ ಆರಂಭಗೊಂಡಿಲ್ಲ. 200 ಹಾಸಿಗೆಗಳ ಆಸ್ಪತ್ರೆಯಲ್ಲಿ ಉಚಿತವಾಗಿ ಚಿಕಿತ್ಸೆ ದೊರೆಯುವ ಸಾಧ್ಯತೆಗಳೂ ಇಲ್ಲದಾಗಿದೆ. ಆಸ್ಪತ್ರೆಯ ನಿರ್ವಹಣೆಯ ಜವಾಬ್ದಾರಿಯನ್ನು ಸರಕಾರವೇ ವಹಿಸಿಕೊಳ್ಳುವಂತೆ ಶೆಟ್ಟರು ಕೇಳಿಕೊಂಡಿದ್ದಾರೆ ಎಂಬ ಬಗ್ಗೆಯೂ ಮಾಹಿತಿ ಇದೆ ಎಂದು ಪ್ರತಿಭಟನಾಕಾರರು ಸಭೆಯಲ್ಲಿ ಪ್ರಸ್ತಾಪಿಸಿದರು.

ಶಿವಸೇನೆ ನಾಯಕ ಮಧುಕರ ಮುದ್ರಾಡಿ ಪ್ರತಿಭಟನಾ ಸಭೆಯ ನೇತೃತ್ವ ವಹಿಸಿದ್ದರು.

 

Leave a Reply

Your email address will not be published. Required fields are marked *