Realtime blog statisticsweb statistics
udupibits.in
Breaking News
ಉಡುಪಿ: ನೌಕರರಿಗೆ ಕಿರುಕುಳ ಆರೋಪ- ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಮಹೇಶ್ ಐತಾಳ್ ಅಮಾನತಿಗೆ ಶ್ರೀರಾಮ ದಿವಾಣ ಒತ್ತಾಯ

ರಿಕ್ಷಾ ಚಾಲಕರ ಮತ್ತು ಮಾಲಕರ ಸಂಘಟನೆಯಿಂದ ಮಾಹಿತಿ ಕಾರ್ಯಕ್ರಮ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ‘ಆಟೋ ರಿಕ್ಷಾ ಚಾಲಕರ ಮತ್ತು ಮಾಲಕರ ಸಂಘಟನೆ (ರಿ)’ಯ ತಿಂಗಳ ಸಭೆಯು ಡಿಸೆಂಬರ್ 4ರಂದು ಬನ್ನಂಜೆ ನಾರಾಯಣಗುರು ಸಭಾಂಗಣದಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ www.udupibits.in (ಅಂತರ್ಜಾಲದ ಸುದ್ದಿ ವಾಹಿನಿ) ಸಂಪಾದಕರಾದ ಶ್ರೀರಾಮ ದಿವಾಣ ಅವರು ಮಾಹಿತಿ ಹಕ್ಕು ಕಾಯಿದೆ ಬಗ್ಗೆ, ಪಿ ಎಫ್ ಮತ್ತು ಇ ಎಸ್ ಐ ಬಗ್ಗೆ ಮಾಹಿತಿ ಸೇವಾ ಸಮಿತಿಯ ಯುವ ವಿಭಾಗದ ಅಧ್ಯಕ್ಷರಾದ ವಿಶ್ವನಾಥ್ ಹಾಗೂ ಮಹಿಳಾ ವಿಭಾಗದ ಅಧ್ಯಕ್ಷೆ ವೀಣಾ ದೀಪಕ್ ಅವರು ಉಪನ್ಯಾಸ ನೀಡಿದರು.

ಸಂಘಟನೆಯ ಅಧ್ಯಕ್ಷರಾದ ರಾಜೇಶ್ ಬಿ. ಶೆಟ್ಟಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಜೊತೆ ಕಾರ್ಯದರ್ಶಿ ದಿವಾಕರ ಪೂಜಾರಿ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಪ್ರಧಾನ ಕಾರ್ಯದರ್ಶಿ ವಿಠಲ ಜತ್ತನ್ನ ಪ್ರಸ್ತಾವನೆಗೈದು ವಂದನಾರ್ಪಣೆ ಸಲ್ಲಿಸಿದರು. ಕೋಶಾಧಿಕಾರಿ ಸ್ಟ್ಯಾನ್ಲಿ ಬಂಗೇರ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *