Realtime blog statisticsweb statistics
udupibits.in
Breaking News
ಉಡುಪಿ: ಅಕ್ರಮ ದಂಧೆಕೋರರಿಂದ ಹಣ ವಸೂಲಿ- ಉಡುಪಿ ನಗರ ಪೊಲೀಸ್ ಠಾಣೆಯ ಎಸ್ ಬಿ ಪಿಸಿ ಮಯ್ಯದ್ದಿ ವಿರುದ್ಧ ದೂರು.

ಉಡುಪಿಯಲ್ಲಿ ವಾಲ್ಮೀಕಿ ಜಯಂತಿ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಇಂದು ಬೆಳಗ್ಗೆ ಉಡುಪಿ ಜಿಲ್ಲಾಧಿಕಾರಿ ಕಚೇರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಮಹರ್ಷಿ ಶ್ರೀ ವಾಲ್ಮೀಕಿ ಜಯಂತಿಯನ್ನು
ಆಚರಿಸಲಾಯಿತು.
ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಅನುಪಸ್ಥಿತಿಯಲ್ಲಿ ಶಾಸಕ ಕೆ.ರಘುಪತಿ ಭಟ್ ದೀಪ ಬೆಳಗಿಸಿ ಉದ್ಘಾಟಿಸಿದರು. ಜಿ.ಪಂ.ಪ್ರಭಾರ ಅಧ್ಯಕ್ಷ ಉಪೇಂದ್ರ ನಾಯಕ್, ತಾ.ಪಂ.ಅಧ್ಯಕ್ಷೆ ಶ್ರೀಮತಿ ಗೌರಿ ಪೂಜಾರಿ ಹಾಗೂ ನಗರಸಭೆಯ ಪೌರಾಯುಕ್ತರಾದ ಗೋಕುಲದಾಸ್ ನಾಯಕ್ ಮುಖ್ಯ ಅತಿಥಿಗಳಾಗಿ
ಭಾಗವಹಿಸಿದ್ದರು. ಬ್ರಹ್ಮಾವರ ಸರಕಾರಿ ಪದವಿಪೂರ್ವ ಕಾಲೇಜಿನ ತೆಕ್ಕಟ್ಟೆ ಸುರೇಂದ್ರ ಶೆಟ್ಟಿ ವಾಲ್ಮೀಕಿ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.
ಜಿಲ್ಲಾಧಿಕಾರಿ ಡಾ.ಎಂ.ಟಿ.ರೇಜು, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ
ಎಸ್.ಎ.ಪ್ರಭಾಕರ ಶರ್ಮ, ತಹಶೀಲ್ದಾರ್ ಅಭಿಜಿನ್.ಬಿ. ಹಾಗೂ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಜಿ.ಎಂ.ಸಾಲಿಮಠ್ ಉಪಸ್ಥಿತರಿದ್ದರು.
ಸಮಾರಂಭದಲ್ಲಿ, ಪರಿಶಿಷ್ಟ ವರ್ಗಕ್ಕೆ ಸೇರಿದ ಪ್ರತಿಭಾವಂತ ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹ ಧನ ವಿತರಿಸಿ ಅಭಿನಂದಿಸಲಾಯಿತು. ಸ್ವ ಉದ್ಯೋಗದ ಫಲಾನುಭವಿಗಳಿಗೆ ಸಹಾಯ ಧನವನ್ನು ವಿತರಿಸಲಾಯಿತು. ಅರಣ್ಯಭೂಮಿ
ಹಕ್ಕುಪತ್ರಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ಜಿಲ್ಲೆಯ 12 ಮಂದಿ ಜನಪ್ರತಿನಿಧಿಗಳನ್ನು ಮುಖ್ಯ ಅತಿಥಿಗಳೆಂದು ಪ್ರಕಟಿಸಲಾಗಿತ್ತು. ಇವರಲ್ಲಿ 10 ಮಂದಿ ಕಾರ್ಯಕ್ರಮಕ್ಕೆ ಆಗಮಿಸದೆ ನಿರ್ಲಕ್ಷಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಬೇಕಾಗಿದ್ದ ಸಚಿವ ಪೂಜಾರಿ ಸಹ ಪಾಲ್ಗೊಂಡಿರಲಿಲ್ಲ.

Leave a Reply

Your email address will not be published. Required fields are marked *