Realtime blog statisticsweb statistics
udupibits.in
Breaking News
ಉಡುಪಿ: ಅಕ್ರಮ ದಂಧೆಕೋರರಿಂದ ಹಣ ವಸೂಲಿ- ಉಡುಪಿ ನಗರ ಪೊಲೀಸ್ ಠಾಣೆಯ ಎಸ್ ಬಿ ಪಿಸಿ ಮಯ್ಯದ್ದಿ ವಿರುದ್ಧ ದೂರು.

ಉಡುಪಿ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ಉದ್ ಘಾಟನೆ

ಉಡುಪಿ: ಮೈಸೂರಿನ ಕೇಂದ್ರ ಚುಟುಕು ಸಾಹಿತ್ಯ ಪರಿಷತ್ ಮತ್ತು ಉಡುಪಿ ಮತ್ತು ದ.ಕ.ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಜಂಟಿಯಾಗಿ ಆಯೋಜಿಸಿದ ಉಡುಪಿ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಉದ್ಘಾಟನೆ ಹಾಗೂ ದ.ಕ.-ಉಡುಪಿ ಜಿಲ್ಲಾ ಮಟ್ಟದ ಚುಟುಕು ಕವಿಗೋಷ್ಟಿಯು ಇಂದು ಬೆಳಗ್ಗೆ ಉಡುಪಿಯ ಪರ್ಯಾಯ ಶ್ರೀ ಸೋದೆ ವಾದಿರಾಜ ಮಠ ಶ್ರೀ ಕೃಷ್ಣ ದೇವಾಲಯದ ಆಶ್ರಯದಲ್ಲಿ ರಾಜಾಂಗಣದಲ್ಲಿ ನಡೆಯಿತು.
ಹಿರಿಯ ಸಾಹಿತಿ, ರಂಗ ನಿರ್ದೇಶಕ ಉದ್ಯಾವರ ಮಾಧವಾಚಾರ್ಯ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಕೇಂದ್ರ ಚುಟುಕು ಸಾಹಿತ್ಯ ಪರಿಷತ್ತಿನ ರಾಜ್ಯ ಪ್ರಧಾನ ಸಂಚಾಲಕ ಡಾ.ಎಂ.ಜಿ.ಆರ್.ಅರಸು ಅಧ್ಯಕ್ಷತೆ ವಹಿಸಿದ್ದರು. ‘ನ್ಯಾಯಮೂರ್ತಿ ಜಿನದತ್ತ ದೇಸಾಯಿಯವರ ಆಯ್ದ ಕವಿತೆಗಳು’ ಕೃತಿಯನ್ನು ಸಚಿವ ಕೋಟ ಶ್ರೀನಿವಾಸ ಪೂಜಾರಿ, ಎ.ಎನ್.ರಮೇಶ್ ಗುಬ್ಬಿ ಇವರ ‘ಗುಬ್ಬಿಯ ಕಲರವ’ ಹನಿಗವನ ಮತ್ತು ಚುಟುಕುಗಳ ಸಂಕಲನವನ್ನು ಶಾಸಕ ಕೆ.ರಘುಪತಿ ಭಟ್ ಹಾಗೂ ‘ರಂಜಿತಾ ಚುಟುಕುಗಳು’ ಸಂಕಲನವನ್ನು ಉದ್ಯಮಿ ಪ್ರಮೋದ್ ಮಧ್ವರಾಜ್
ಬಿಡುಗಡೆಗೊಳಿಸಿದರು. ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕರಾದ ಕುದಿ ವಸಂತ ಶೆಟ್ಟಿ ಹಾಗೂ ಡಾ.ಎಂ.ಜಿ.ಆರ್.ಅರಸು ಇವರನ್ನು ಸಮಾರಂಭದಲ್ಲಿ ಸಮ್ಮಾನಿಸಿ, ಗೌರವಿಸಲಾಯಿತು. ಸೋದೆ ವಾದಿರಾಜ ಮಠದ ದಿವಾನ ಪಾಡಿಗಾರು ಶ್ರೀನಿವಾಸ ತಂತ್ರಿ, ಕೌಸ್ತುಭ ಪತ್ರಿಕೆಯ ಸಂಪಾದಕರಾದ ರತ್ನಾ ಹಾಲಪ್ಪ ಗೌಡ, ಉಡುಪಿ ನಗರ ಸಭೆ ಉಪಾಧ್ಯಕ್ಷೆ ಭಾರತಿ ಚಂದ್ರಶೇಖರ್, ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ಪ್ರಾಂಶುಪಾಲೆ, ಹಿರಿಯ ಸಾಹಿತಿ ಮಾಧವಿ ಭಂಡಾರಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕರಾದ ದುಗ್ಗೇ ಗೌಡ, ಯೋಜನಾಧಿಕಾರಿ ದಯಶೀಲ, ದ.ಕ.ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಇರಾ ನೇಮು ಪೂಜಾರಿ, ಉಡುಪಿ ಕಾರ್ಯಾಧ್ಯಕ್ಷೆ ತಾರಾ ಆಚಾರ್ಯ, ಹಾಗೂ ಜೆ.ಎಸ್.ಪಾಣಿ
ಉಪಸ್ಥಿತರಿದ್ದರು.
ಉದ್ಘಾಟನಾ ಸಮಾರಂಭಕ್ಕಿಂತ ಮೊದಲು ಇರಾ ನೇಮು ಪೂಜಾರಿಯವರು ಚುಟುಕು ಸಾಹಿತ್ಯ ಪರಿಷತ್ತಿನ ಧ್ವಜಾರೋಹಣ ನೆರವೇರಿಸಿದರು. ಉದ್ಘಾಟನಾ ಸಮಾರಂಭದ ಬಳಿಕ ಮಾಧವಿ ಭಂಡಾರಿ ಅಧ್ಯಕ್ಷತೆಯಲ್ಲಿ ಕವಿಗೋಷ್ಟಿ ನಡೆಯಿತು.

Leave a Reply

Your email address will not be published. Required fields are marked *